ಬೆಂಗಳೂರು: ಕೊರೋನಾ ಬೆನ್ನಲ್ಲೇ ವಕ್ಕರಿಸಿಕೊಂಡಿರುವ ಬ್ಲ್ಯಾಕ್ ಫಂಗಸ್ ರೋಗದ ಬಗ್ಗೆ ಇಂದು ನೇತ್ರ ತಜ್ಞರ ಜೊತೆ ಚರ್ಚಿಸಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಈ ರೋಗಕ್ಕೆ ಸಂಬಂಧಿಸಿದಂತೆ ತಜ್ಞರಿಂದ ಅಗತ್ಯ ಮಾಹಿತಿ ಪಡೆದು, ಈ ಕುರಿತಂತೆ ಅಧ್ಯಯನ, ಚಿಕಿತ್ಸಾ ವಿಧಾನಗಳ ಬಗ್ಗೆ ಅಗತ್ಯ ಮಾರ್ಗದರ್ಶನ ನೀಡಲು ಸಂಬಂಧಿಸಿದಂತೆ ತಜ್ಞರ ಸಮಿತಿ ರಚನೆ ಮಾಡಲಾಗುತ್ತದೆ. ಇಂದಿನಿಂದ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ಗೆ ಪ್ರಾಯೋಗಿಕ ವಿಶೇಷ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಜಿಲ್ಲಾ ಆಸ್ಪತ್ರೆಗಳಲ್ಲಿಯೂ ಈ ಸಂಬಂಧ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಬ್ಲ್ಯಾಕ್ ಫಂಗಸ್ಗೆ ಸುಮಾರು ಏಳು ವಾರಗಳ ಕಾಲ ಚಿಕಿತ್ಸೆ ಪಡೆಯುವ ಅವಶ್ಯಕತೆ ಇದೆ. ಇದಕ್ಕೆ ಸುಮಾರು 2 -3 ಲಕ್ಷ ರೂ. ಗಳು ತಗುಲುತ್ತವೆ. ಇದನ್ನು ಉಚಿತವಾಗಿ ನೀಡುವುದಕ್ಕೆ ಸಾಧ್ಯವಿದೆಯೇ ಎಂಬುದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸಲಾಗುವುದು. ಹಾಗೆಯೇ ಇದಕ್ಕೆ ಪೂರಕವಾದ ಔಷಧಗಳ ಕೊರತೆ ಇದ್ದು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.