ಬೆಂಗಳೂರು: ಕೊರೋನಾ ಸಂಬಂಧಿಸಿದಂತೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಮತ್ತು ಇತ್ತೀಚಿನ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರು, ಉಪನ್ಯಾಸಕರಲ್ಲಿ ಯಾರಾದರೂ ಸೋಂಕು ತಗುಲಿ ಮೃತಪಟ್ಟಿದ್ದರೆ ಅಂತಹವರ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸಚಿವ ಸುರೇಶ್ ಕುಮಾರ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ವರ್ಷದ ಎಪ್ರಿಲ್ ತಿಂಗಳಿನಿಂದ ಈ ವರೆಗೆ ಸೋಂಕು ತಗುಲಿ ಮೃತರಾದ ಶಿಕ್ಷಕರ ಮತ್ತು ಉಪನ್ಯಾಸಕರ ವಯೋಮಾನ ಸಹಿತ, ಸಾವನ್ನಪ್ಪರುವುದಕ್ಕೆ ಖಚಿತ ಕಾರಣವನ್ನು ತಕ್ಷಣದಲ್ಲೇ ವರದಿ ನೀಡುವಂತೆ ಶಿಕ್ಷಣ ಇಲಾಖೆಯ ಆಯುಕ್ತರು, ಪದವಿ ಪೂರ್ವ ಶಿಕ್ಷಣ ನಿರ್ದೇಶಕರಿಗೆ ಸಚಿವರು ಸೂಚಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಕಾರ್ಯಗಳಲ್ಲಿ ಶಿಕ್ಷಕರು, ಉಪನ್ಯಾಸಕರುಗಳೂ ಕೈಜೋಡಿಸಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ತಗುಲಿ ಮೃತರಾದವರ ಮಾಹಿತಿ ಸರ್ಕಾರಕ್ಕೆ ತಕ್ಷಣ ಸಲ್ಲಿಸಲು ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.