ಬೆಂಗಳೂರು: ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿರುವ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಭವಿಷ್ಯ, ಯೋಗಕ್ಷೇಮ, ಆರೋಗ್ಯ ಮೊದಲಾದ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂಬ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಈ ಬಗ್ಗೆ ವಿದ್ಯಾರ್ಥಿಗಳು ವಿಚಲಿತರಾಗದೆ ಓದಿನಲ್ಲಿ ತೊಡಗಿಸಿಕೊಳ್ಳುವಂತೆಯೂ ಸಚಿವರು ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.