ಕೋಲ್ಕತ್ತಾ: ನಾರದಾ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಬಿಐ ದಾಳಿ ನಡೆಸಿ ಟಿಎಂಸಿ ನಾಯಕರು ಮತ್ತು ಮಂತ್ರಿಗಳಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ ಮತ್ತು ಶಾಸಕ ಮದನ್ ಮಿತ್ರಾ ಅವರನ್ನು ವಶಕ್ಕೆ ಪಡೆದುಕೊಂಡಿದೆ.
ಇವರ ಬಂಧನದ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಬಿಐ ಕಚೇರಿಯನ್ನು ತಲುಪಿದ್ದಾರೆ.
ಟಿಎಂಸಿ ನಾಯಕರೊಂದಿಗೆ, ಕೋಲ್ಕತಾ ಮಾಜಿ ಮೇಯರ್ ಸೋವನ್ ಚಟರ್ಜಿಯನ್ನೂ ಇದೇ ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ. ನಾರದಾ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದಲ್ಲಿ ಟಿಎಂಸಿ ನಾಯಕರನ್ನು ವಶಕ್ಕೆ ಪಡೆದು ಸಿಬಿಐ ಕಚೇರಿಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ಈ ಟಿಎಂಸಿ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಸಿಬಿಐಗೆ ಅನುಮತಿ ನೀಡಿದ್ದರು.
ಇದೀಗ ಸಿಬಿಐ ತಂಡವು ನಾರದಾ ಪ್ರಕರಣದಲ್ಲಿ ತನ್ನ ಚಾರ್ಜ್ಶೀಟ್ ಅನ್ನು ಬಂಕ್ಷಾಲ್ ನ್ಯಾಯಾಲಯಕ್ಕೆ ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.