ಬೆಂಗಳೂರು: ಕಾಪು ಸಮೀಪ ಅರಬ್ಬೀ ಸಮುದ್ರದಲ್ಲಿ ಟಗ್ ಬೋಟ್ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರ ರಕ್ಷಣೆ ಮಾಡಿದ ಕೋಸ್ಟ್ ಗಾರ್ಡ್ ಮತ್ತು ನೌಕಾಪಡೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧನ್ಯವಾದ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅರಬ್ಬಿ ಸಮುದ್ರದಲ್ಲಿ ಟಗ್ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಹಿದ ಕೋಸ್ಟ್ ಗಾರ್ಡ್ ಮತ್ತು ನೌಕಾಪಡೆಗೆ ಧನ್ಯವಾದಗಳು. ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯ ತಪಾಸಣೆ ಸೇರಿದಂತೆ ಎಲ್ಲಾ ಅಗತ್ಯ ನೆರವುಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕರಾವಳಿಯಲ್ಲಿ ಅಬ್ಬರಿಸಿದ ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಕ್ಕಿ ಈ ಕಾರ್ಮಿಕರಿದ್ದ ಟಗ್ ಬೋಟ್ ಉಡುಪಿಯ ಕಾಪು ದ್ವೀಪಸ್ತಂಭದ ಬಳಿ ಸಿಲುಕಿಕೊಂಡಿತ್ತು.
ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು. ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ.
— CM of Karnataka (@CMofKarnataka) May 17, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.