ಬೆಂಗಳೂರು: ರಾಜ್ಯದಲ್ಲಿ ಯಾರಿಗಾದರೂ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿದಲ್ಲಿ ಅದನ್ನು ಸರ್ಕಾರದ ಗಮನಕ್ಕೆ ತರಬೇಕು. ಮುಚ್ಚಿಟ್ಟರೆ ಅದು ಕಾನೂನು ಬಾಹಿರವಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕೆಲವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಆದರೆ ಇದು ಕೊರೋನಾ ಸೋಂಕಿನಂತಹ ರೋಗವಲ್ಲ. ಕೋವಿಡ್ ಹರಡುವಂತೆಯೂ ಈ ಸೋಂಕು ಹರಡುವುದಿಲ್ಲ. ಅತಿಯಾದ ಮಧುಮೇಹ ಇರುವ, ಸ್ಟಿರಾಯ್ಡ್ ಔಷಧಿಯನ್ನು ಪಡೆಯುತ್ತಿರುವವರಲ್ಲಿ ಕೆಲವರಿಗೆ ಈ ಸೋಂಕು ಬಾಧಿಸಿದೆ. ಹಾಗೆಯೇ ಎಚ್ಐವಿ, ಕ್ಯಾನ್ಸರ್, ಅಂಗಾಂಗ ಕಸಿ ಮಾಡಿಸಿಕೊಂಡವರಿಗೂ ಈ ಸೋಂಕು ಬರುವ ಸಾಧ್ಯತೆ ಇದ್ದು, ಎಚ್ಚರದಿಂದ ಇರುವಂತೆ ಸಚಿವರು ಮನವಿ ಮಾಡಿದ್ದಾರೆ.
ಈ ಸೋಂಕು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಬೇಗನೆ ಬಾಧಿಸುತ್ತದೆ. ಆರಂಭದಲ್ಲಿ ಮೂಗಿಗೆ ದಾಳಿ ಮಾಡುವ ಈ ಶಿಲೀಂಧ್ರ ಬಳಿಕ ಕಣ್ಣಿಗೆ ಹಾನಿ ಮಾಡುತ್ತದೆ. ಇದರ ಮೂಲವನ್ನು ಪತ್ತೆ ಹಚ್ಚುವಂತೆ ತಜ್ಞರಿಗೂ ಸೂಚಿಸಲಾಗಿದೆ. ಅವರು ನೀಡುವ ವರದಿಯನ್ನು ಆಧರಿಸಿ ಮುನ್ನೆಚ್ಚರಿಕೆ ವಹಿಸಲಾಗುತ್ತದೆ ಎಂದು ಸುಧಾಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.