ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯಗಳಲ್ಲಿ ಪೈಕಿ ಕರ್ನಾಟಕ ಉತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾದ ಈ ಯೋಜನೆಯಲ್ಲಿ 2020-21 ನೇ ಸಾಲಿನಲ್ಲಿ ಕರ್ನಾಟಕ ಉತ್ತಮ ರಾಜ್ಯ ಎನಿಸಿಕೊಂಡಿದೆ. ಉಪಕೇಂದ್ರಗಳ ವಿಭಾಗಕ್ಕೆ ಸಂಬಂಧಿಸಿದಂತೆ 2263 ಎಚ್ಡಬ್ಲ್ಯುಸಿ ಆರಂಭಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು ಇದರಂತೆ ಈವರೆಗೆ 3300 ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಇದರಲ್ಲಿ ರಾಜ್ಯ ನಿಗದಿ ಮಾಡಿರುವುದಕ್ಕಿಂತಲೂ ಹೆಚ್ಚು ಗುರಿ ಸಾಧಿಸಿದೆ.
294 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎಚ್ಡಬ್ಲ್ಯುಸಿ ಆಗಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ರಾಜ್ಯದಲ್ಲಿ 364 ಕೇಂದ್ರ ರೂಪಿಸಲಾಗಿದೆ. ಒಟ್ಟಿನಲ್ಲಿ ರಾಜ್ಯಕ್ಕೆ ನೀಡಿದ್ದ 4653 ಎಚ್ಡಬ್ಲ್ಯುಸಿ ಸ್ಥಾಪಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ರಾಜ್ಯ 5832 ಕೇಂದ್ರಗಳನ್ನು ಆರಂಭಿಸಿ ಸಾಧನೆ ಮಾಡಿದೆ. ಆ ಮೂಲಕ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ಬಲಪಡಿಸುವ ಉದ್ದೇಶವನ್ನು ಸರ್ಕಾರ ಸಾಕಾರಗೊಳಿಸಿದೆ. ಇದಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಎಲ್ಲಾ ಆರೋಗ್ಯ ಕೇಂದ್ರಗಳನ್ನು ಎಚ್ಡಬ್ಲ್ಯುಸಿಯಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಸೇವೆ ನೀಡುತ್ತಿರುವ 11595 ಕೇಂದ್ರಗಳನ್ನು ಎಚ್ಡಬ್ಲ್ಯುಸಿಯಾಗಿ ಮೇಲ್ದರ್ಜೆಗೆ ಏರಿಸುವ ಗುರಿಯೂ ರಾಜ್ಯ ಸರ್ಕಾರದ ಮುಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.