ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ಡೌನ್ ಮೇ 24 ರಂದು ಮುಗಿಯಲಿದ್ದು, ಅದನ್ನು ವಿಸ್ತರಣೆ ಮಾಡುವ ಸಂಬಂಧ ಮೇ 23 ರಂದು ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಜಾರಿಗೊಳಿಸಲಾದ ಲಾಕ್ಡೌನ್ನಿಂದ ಬೆಂಗಳೂರು ನಗರವೂ ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಯಾವ ರೀತಿಯ ಪರಿಣಾಮ ಬೀರಿದೆ ಎಂಬುದರ ಬಗ್ಗೆ ವಿಮರ್ಶಿಸಿ, ಮುಂದಿನ ದಿನಗಳಲ್ಲಿ ಯಾವ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಸ್ಥಿತಿ ನಿಭಾಯಿಸಲು ಸಾಧ್ಯ ಎಂಬುದಾಗಿ ಸಚಿವರು, ಅಧಿಕಾರಿಗಳ ಜೊತೆಗೆ ಚರ್ಚಿಸಿ ಮೇ 23 ರಂದು ನಿರ್ಣಯ ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
1250 ಕೋಟಿ ರೂ. ಗಳ ವಿಶೇಷ ಆರ್ಥಿಕ ಪ್ಯಾಕೇಜ್ ಸಂಬಂಧಿಸಿದಂತೆಯೂ ಮಾತನಾಡಿರುವ ಅವರು, ಸದ್ಯ ಸರ್ಕಾರದ ಇತಿಮಿತಿಯಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಚಿಂತಿಸಿ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.