ಬೆಂಗಳೂರು: ಕೊರೋನಾ ಮೂರನೇ ಅಲೆಯು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಆರಂಭದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಲು ಪೂರಕವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರ ತಂಡ ತಿಳಿಸಿದೆ.
ಮೂರನೇ ಅಲೆಯ ಸಂದರ್ಭದಲ್ಲಿ ಚಿಕಿತ್ಸೆ ದೊರೆಯುವಲ್ಲಿ ಯಾವುದೇ ಸಮಸ್ಯೆ ಆಗಬಾರದು. ಈ ಹಿನ್ನೆಲೆಯಲ್ಲಿ ಆಕ್ಸಿಜನ್, ಔಷಧಗಳು, ವೆಂಟಿಲೇಟರ್ಗಳು, ಎಚ್ಎಫ್ಎನ್ಸಿ, ಸಿಪಿಎಪಿ ಯಂತ್ರಗಳು, ಹಾಸಿಗೆಗಳ ವ್ಯವಸ್ಥೆ ಮೊದಲಾದವುಗಳನ್ನು ಹೆಚ್ಚಿಸಲು ತಜ್ಞರು ಸೂಚಿಸಿದ್ದಾರೆ.
ಕೊರೋನಾ ಸೋಂಕಿತ ಮಕ್ಕಳ ಪ್ರಕರಣಗಳನ್ನು ನಿಭಾಯಿಸಲು ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ವೈದ್ಯರು, ತಜ್ಞರ ಅವಶ್ಯಕತೆ ಇದೆ. ಸದ್ಯ ವಯಸ್ಕರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೂ ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ. ಖಾಯಂ ಸಿಬ್ಬಂದಿ ನೇಮಕ ಸುದೀರ್ಘ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳ ನೇಮಕಕ್ಕೆ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.