ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ನಡುವೆ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಐಸಿಯು ಹಾಸಿಗೆಗಳ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯು ಸಾರಿಗೆ ಸುರಕ್ಷಾ ಸಂಚಾರಿ ಐಸಿಯು ಮತ್ತು ಸಂಚಾರಿ ಆಮ್ಲಜನಕ ಬಸ್ಗಳ ವ್ಯವಸ್ಥೆ ಕಲ್ಪಿಸಿದ್ದು, ಈ ವ್ಯವಸ್ಥೆಗೆ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಚಾಲನೆ ನೀಡಿದರು.
ಬೆಂಗಳೂರಿನ ಕೆಎಸ್ಆರ್ಟಿಸಿ ಕೇಂದ್ರ ಕಚೇರಿ ಎದುರು ಈ ಬಸ್ಸುಗಳಿಗೆ ಸವದಿ ಚಾಲನೆ ನೀಡಿದರು. ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಪೂರಕ ಆಮ್ಲಜನಕ ಐಸಿಯು ಬೆಡ್ಗಳ ಕೊರತೆ ಇದ್ದು, ಈ ಹಿನ್ನೆಲೆಯಲ್ಲಿ ತುರ್ತು ಅವಶ್ಯಕತೆ ಇರುವ ರೋಗಿಗಳ ಚಿಕಿತ್ಸೆಗೆ ,ಅವರಿಗೆ ಆಮ್ಲಜನಕ ನೀಡಲು ಪೂರಕವಾಗುವಂತೆ ಈ ಬಸ್ಸುಗಳಲ್ಲಿ ಸಂಸ್ಥೆ ವ್ಯವಸ್ಥೆ ಕಲ್ಪಿಸಿದೆ.
ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸುವುದೇ ಸವಾಲಾಗಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಇಂತಹ ಒಂದು ಅಗತ್ಯ ಸೇವೆ ಕಲ್ಪಿಸುವ ಮೂಲಕ ಸೋಂಕು ನಿಯಂತ್ರಣ ವಿಚಾರದಲ್ಲಿ ಸರ್ಕಾರದ ಜೊತೆಗೆ ಕೈ ಜೋಡಿಸಿದೆ.
ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಕೊರೊನಾ ಸೋಂಕಿತರಿಗೆ ಅವಶ್ಯವಿರುವ ಐಸಿಯು ಆನ್ ವೀಲ್ಸ್ ಮತ್ತು ಆಕ್ಸಿಜನ್ ಆನ್ ವೀಲ್ಸ್ ಬಸ್ಗಳನ್ನು ಲೋಕಾರ್ಪಣೆಗೊಳಿಸಲಾಯಿತು.
ಸಚಿವ @STSomashekarMLA, ಶಾಸಕಚಂದ್ರಪ್ಪ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಇದ್ದರು. pic.twitter.com/dA86v73yLK
— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) May 19, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.