ಬೆಂಗಳೂರು: ಕೋವ್ಯಾಕ್ಸಿನ್ ಕ್ಲಿನಿಕಲ್ ಪ್ರಯೋಗ ನಡೆಸಿದ್ದ ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯು ಇದೀಗ ಜೈಡಸ್ ಕ್ಯಾಡಿಲಾ ಸಂಸ್ಥೆ ಅಭಿವೃದ್ಧಿ ಮಾಡುತ್ತಿರುವ ‘ಝೈಕೋವ್-ಡಿ’ 3 ನೇ ಹಂತದ ಕ್ಲಿನಿಕಲ್ ಟ್ರಯಲ್ನಲ್ಲಿ ಭಾಗಿಯಾಗಿದೆ. ಈ ಔಷಧವನ್ನು 12 – 18 ವರ್ಷದ ಮಕ್ಕಳ ಮೇಲೆ ಪ್ರಯೋಗ ನಡೆಸಲಾಗುತ್ತಿದೆ.
ಈ ಸಂಬಂಧ ಆಸ್ಪತ್ರೆಯ ನಿರ್ದೇಶಕ ಡಾ ಅಮಿತ್ ಬಾತ್ರೆ ಖಾಸಗಿ ವಾಹಿನಿಯೊಂದಕ್ಕೆ ಮಾಹಿತಿ ನೀಡಿದ್ದು, ಈ ಪ್ರಯೋಗಕ್ಕೆ ಬೆಳಗಾವಿಯ ತಲಾ 10 ಹುಡುಗರು ಮತ್ತು ಹುಡುಗಿಯರನ್ನು ಸ್ವಯಂಸೇವಕರನ್ನಾಗಿ ಆಯ್ಕೆ ಮಾಡಲಾಗಿದೆ. ಅವರಿಗೆ ಈಗಾಗಲೇ ಮೊದಲ ಡೋಸ್ ನೀಡಲಾಗಿದ್ದು, ಅವರಲ್ಲಿ ಯಾವುದೇ ಅಡ್ಡ ಪರಿಣಾಮ ಕಂಡುಬಂದಿಲ್ಲ. ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ 28 ನೇ ದಿನಕ್ಕೆ 2 ನೇ ಡೋಸ್ ಮತ್ತು 52 ನೇ ದಿನಕ್ಕೆ 3 ನೇ ಡೋಸ್ ಲಸಿಕೆ ನೀಡಲಾಗುತ್ತದೆ. ಲಸಿಕೆ ನೀಡಿದ ಬಳಿಕ ಅವರ ರಕ್ತದ ಮಾದರಿ ಪರೀಕ್ಷೆಗಳನ್ನು ಸಹ ಸಂಗ್ರಹಿಸಿ ರೋಗ ನಿರೋಧಕ ಶಕ್ತಿ ಪರೀಕ್ಷೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಕೊರೋನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಲಸಿಕೆಯ ಪ್ರಯೋಗ ಪ್ರಾಮುಖ್ಯತೆ ಪಡೆದಿದೆ. ದೇಶದ ವಿವಿಧ ಭಾಗಗಳಲ್ಲಿ ಈ ಪ್ರಯೋಗ ನಡೆಯುತ್ತಿದ್ದು, ಇದರಲ್ಲಿ 1700 ಸ್ವಯಂಸೇವಕರು ಕರ್ನಾಟಕದವರೇ ಆಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.