ಮೈಸೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಗಳಲ್ಲಿ ರಹಸ್ಯವಾಗಿ ಚಿಕಿತ್ಸೆ ನೀಡುವಂತಿಲ್ಲ. ಈ ಸಂಬಂಧ ಸರ್ಕಾರದ ಗಮನಕ್ಕೆ ಕಡ್ಡಾಯವಾಗಿ ತರಬೇಕು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆದ ಬಳಿಕ ಕೆಲವರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗುತ್ತಿದೆ. ಈ ಸಂಬಂಧ ಸರ್ಕಾರ ಹೆಚ್ಚಿನ ನಿಗಾ ವಹಿಸಿದ್ದು, ಇದಕ್ಕಾಗಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ಸೋಂಕಿತರ ಬಗ್ಗೆ ಸರ್ಕಾರಕ್ಕೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ. ಇದಕ್ಕೆ ರಹಸ್ಯವಾಗಿ ಚಿಕಿತ್ಸೆ ನೀಡುವುದು ಅಪರಾಧ ಎಂದು ಅವರು ತಿಳಿಸಿದ್ದಾರೆ.
ಈ ಸೋಂಕಿಗೆ ತುತ್ತಾದವರು ರಹಸ್ಯವಾಗಿ ಚಿಕಿತ್ಸೆ ಪಡೆಯುವುದು ಸಹ ತಪ್ಪು. ಈ ಸಂಬಂಧ ಮಾಹಿತಿ ಮುಚ್ಚಿಟ್ಟಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಸೋಂಕಿನಿಂದ ಸುಮಾರು 100 ಕ್ಕೂ ಅಧಿಕ ಮಂದಿ ಬಳಲುತ್ತಿದ್ದಾರೆ ಎಂಬ ಮಾಹಿತಿ ಸರ್ಕಾರಕ್ಕೆ ದೊರೆತಿದೆ ಎಂದು ಡಿಸಿಎಂ ಹೇಳಿದ್ದಾರೆ. ಹಾಗೆಯೇ ಮೈಸೂರು, ಮಂಗಳೂರು, ಬೆಂಗಳೂರು, ಕಲ್ಬುರ್ಗಿ, ಹುಬ್ಬಳ್ಳಿಗಳಲ್ಲಿ ಈ ಸೋಂಕಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಚಿಕಿತ್ಸೆಗೆ ಅಗತ್ಯವಾದ ಔಷಧವನ್ನು ಹೆಚ್ಚಿನ ಪ್ರಮಾಣದಲ್ಲಿ ಒದಗಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ವಿದೇಶಗಳಿಂದ ಈ ಔಷಧಗಳನ್ನು ಆಮದು ಮಾಡಿಕೊಂಡು ಅಗತ್ಯಕ್ಕೆ ತಕ್ಕಂತೆ ರಾಜ್ಯಗಳಿಗೆ ಪೂರೈಕೆ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.