ಕಲ್ಬುರ್ಗಿ: ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾಂಗ್ರೆಸ್ ಪಕ್ಷವೇ ಕಾರಣ. ಕೊರೋನಾದಿಂದ ಉಂಟಾಗುತ್ತಿರುವ ಸಾವಿಗೂ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸೋಂಕು ತಗುಲಿ ಎರಡು ದಿನಗಳ ಹಿಂದೆ ಸಾವನ್ನಪ್ಪಿದ ಕಲ್ಬುರ್ಗಿ ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ದತ್ತಾತ್ರೇಯ ತೂಗಾಂವಕರ್ ಕುಟುಂಬಕ್ಕೆ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಬೀದರ್ಗೆ ತೆರಳುವ ಸಂದರ್ಭದಲ್ಲಿ ಮಾತನಾಡಿದ ಕಟೀಲ್, ಕೊರೋನಾ ಮತ್ತು ಕೊರೋನಾದಿಂದ ಮೃತರಾಗುತ್ತಿರುವವರ ಸಾವಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಹೇಳಿದ್ದಾರೆ.
ದೇಶದಲ್ಲಿ ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಿದ ಕಾಂಗ್ರೆಸ್, ಜನರ ದಾರಿ ತಪ್ಪಿಸಿ ಲಸಿಕೆ ಪಡೆಯದಂತೆ ತಡೆಯಿತು. ಇದರ ಪರಿಣಾಮ ಲಸಿಕೆಗಳು ವ್ಯರ್ಥವಾದವು. ಸೋಂಕು ಹಾಗೂ ಸಾವಿನ ಪ್ರಮಾಣ ಏರಿಕೆಯಾಯಿತು ಎಂದು ಹೇಳಿದ್ದಾರೆ. ಕೊರೋನಾ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ವ್ಯವಸ್ಥಿತ ಸಂಚು ಕಾಂಗ್ರೆಸ್ನಿಂದಾಗಿದೆ ಎಂದು ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಲು ಫೆಬ್ರವರಿಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರೇ ಲಸಿಕೆ ಪಡೆದು ಜನರಿಗೆ ಮಾದರಿಯಾದರು. ಮೇ ತಿಂಗಳ ವರೆಗೂ ಜನರು ಲಸಿಕೆ ತೆಗೆದುಕೊಳ್ಳುವತ್ತ ಹೆಚ್ಚು ಮನ ಮಾಡಲಿಲ್ಲ. ಈಗ ಜನರ ದಾರಿ ತಪ್ಪಿಸಿದ ಕಾಂಗ್ರೆಸ್ ಸಹ ಲಸಿಕೆ ಇಲ್ಲ ಎಂದು ಕಣ್ಣೀರು ಹಾಕುತ್ತಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.