ಬೆಂಗಳೂರು: ಕೊರೋನಾ ಸೋಂಕಿನಂತೆ ಬ್ಲ್ಯಾಕ್ ಫಂಗಸ್ ಸೋಂಕು ಸಾಂಕ್ರಾಮಿಕ ರೋಗವಲ್ಲ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿಯೂ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಸೋಂಕು ನಿಯಂತ್ರಣ ಮಾಡಲು ಪೂರಕವೆನಿಸಿದ ಔಷಧಗಳ ಪೂರೈಕೆಗೂ ರಾಜ್ಯ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ.
ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಉಳ್ಳವರು, ಕೊರೋನಾ ಚಿಕಿತ್ಸೆಯ ಸಂದರ್ಭದಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹಿಗಳಲ್ಲಿ ಈ ಸೋಂಕಿನ ಲಕ್ಷಣ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದವರ ಆರೋಗ್ಯ ತಪಾಸಣೆಗೂ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.