ಬೆಂಗಳೂರು: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ 23,680 ಎಂಪೋಟೆರಿಸಿನ್ – ಬಿ ವಯಲ್ಸ್ಗಳನ್ನು ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ 1,270 ವಯಲ್ಸ್ ದೊರೆತಿದೆ.
ದೇಶದ ಬೇರೆ ಬೇರೆ ರಾಜ್ಯಗಳಲ್ಲಿನ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆಯನ್ನು ಆಧರಿಸಿ ಈ ಹಂಚಿಕೆ ಮಾಡಲಾಗಿದೆ. ದೇಶದಲ್ಲಿ ಒಟ್ಟು 8,848 ಬ್ಲ್ಯಾಕ್ ಫಂಗಸ್ ಪ್ರಕರಣಗಳಿದ್ದು, ರಾಜ್ಯದಲ್ಲಿರುವ 500 ಪ್ರಕರಣಗಳ ಆಧಾರದಲ್ಲಿ 1270 ವಯಲ್ಸ್ ನೀಡಲಾಗಿದೆ.
ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಾಗಿರುವ ಗುಜರಾತ್ಗೆ 5800 ವಯಲ್ಸ್ ನೀಡಲಾಗಿದೆ. ಕರ್ನಾಟಕವೂ ಸೇರಿದಂತೆ ಒಟ್ಟು ಎಂಟು ರಾಜ್ಯಗಳಿಗೆ ಔಷಧ ಪ್ರಮಾಣದ 75% ವನ್ನು ಹಂಚಿಕೆ ಮಾಡಲಾಗಿದೆ. ಉಳಿದ 25% ಗಳನ್ನು ರೋಗಿಗಳ ಸಂಖ್ಯೆ ಪರಿಶೀಲನೆಯ ಬಳಿಕ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.