ಬೆಂಗಳೂರು: ಜೇಮ್ಶೆಡ್ಪುರದಿಂದ 120 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ರೈಲು ಇಂದು ಮುಂಜಾನೆ ಬೆಂಗಳೂರು ತಲುಪಿದೆ.
ಈ ರೈಲಿನ ಎಲ್ಲಾ ಸಿಬ್ಬಂದಿಗಳೂ ಮಹಿಳೆಯರೇ ಎಂಬುದು ಇದರ ಇನ್ನೊಂದು ವಿಶೇಷತೆಯಾಗಿತ್ತು. ಈ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ನಗರಕ್ಕೆ ಮೆಡಿಕಲ್ ಆಕ್ಸಿಜನ್ ಹೊತ್ತು ತಂದ ಏಳನೇ ರೈಲಾಗಿದೆ.
ಇನ್ನು ಗುಜರಾತ್ನ ಜಾಮ್ ನಗರದಿಂದ ಆಕ್ಸಿಜನ್ ಹೊತ್ತು 8 ನೇ ರೈಲು ಸಹ ಬೆಂಗಳೂರು ತಲುಪಿದೆ. ಈ ಆಕ್ಸಿಜನ್ ಎಕ್ಸ್ಪ್ರೆಸ್ನಲ್ಲಿ 109.2 ಮೆಟ್ರಿಕ್ ಟನ್ ಆಕ್ಸಿಜನ್ ರಾಜ್ಯಕ್ಕೆ ಬಂದು ತಲುಪಿದೆ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಏರಿಕೆಯಿಂದಾಗಿ ಸೋಂಕಿತರ ಚಿಕಿತ್ಸೆಗೆ ನಿತ್ಯ 1200 ಮೆಟ್ರಿಕ್ ಟನ್ ಆಕ್ಸಿಜನ್ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮೆಡಿಕಲ್ ಆಕ್ಸಿಜನ್ ಅನ್ನು ಆಕ್ಸಿಜನ್ ಎಕ್ಸ್ಪ್ರೆಸ್ಗಳ ಮೂಲಕ ತಲುಪಿಸುವ ಕಾರ್ಯ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.