ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ನೌಕರರ ಅವಲಂಬಿತರಿಗೆ ತಕ್ಷಣವೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ ಅನ್ಬುಕುಮಾರ್ ಸೂಚಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಮತ್ತು ಇತರ ಕರ್ತವ್ಯದ ಮೇಲೆ ಸರ್ಕಾರ ನಿಯೋಜಿಸಿದ ಇಲಾಖೆಯ ಅಧಿಕಾರಿಗಳು, ನೌಕರರು, ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂತಹವರಲ್ಲಿ ಯಾರಾದರೂ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದರೆ ಅವರ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ಮಂಜೂರು ಮಾಡುವುದು ಮತ್ತು ಆ ಬಗ್ಗೆ ವರದಿಯನ್ನು ನೀಡುವಂತೆಯೂ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.