ನವದೆಹಲಿ: ಟೂಲ್ಕಿಟ್ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಟ್ವಿಟರ್ ಸಂಸ್ಥೆಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಟ್ವಿಟರ್ಗೆ ನೋಟಿಸ್ ನೀಡಲು ದೆಹಲಿ ಪೊಲೀಸರ ತಂಡ ಟ್ವಿಟರ್ ಕಚೇರಿಗೆ ಹೋಗಿದೆ ಎಂದು ಹೇಳಲಾಗಿದೆ.
ಟ್ವಿಟರ್ ಇಂಡಿಯಾ ಎಂ.ಡಿ ನೀಡಿದ ಉತ್ತರಗಳು ಅಸ್ಪಷ್ಟವಾಗಿರುವುದರಿಂದ ನೋಟಿಸ್ ನೀಡಲು ಸೂಕ್ತ ವ್ಯಕ್ತಿ ಯಾರು ಎಂದು ಕಂಡುಹಿಡಿಯಲು ಬಯಸಿದ್ದರಿಂದ ಕಛೇರಿಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಟ್ವೀಟ್ ಅನ್ನು ತಿರುಚಿದ್ದು ಎಂದು ಟ್ವಿಟರ್ ಹೇಳಿತ್ತು. ಈ ಬಗ್ಗೆ ಟ್ವಿಟ್ಟರ್ ನಿಂದ ಸ್ಪಷ್ಟನೆ ಕೋರಿ ಸಲ್ಲಿಸಲಾದ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆ, ಪಾತ್ರ ಅವರು ಸರ್ಕಾರವನ್ನು ಗುರಿಯಾಗಿಸಿ ಕಾಂಗ್ರೆಸ್ ಸಿದ್ಧಪಡಿಸಿದ ಟೂಲ್ಕಿಟ್ ಅನ್ನು ಹಂಚಿಕೊಂಡಿದ್ದರು. ನಂತರ, ಟ್ವಿಟರ್ ಇದನ್ನು ತಿರುಚಿದ್ದು ಎಂದು ಲೇಬಲ್ ಮಾಡಿತ್ತು.
ಟೂಲ್ಕಿಟ್ ಅನ್ನು ನಕಲಿ ಎಂದು ಹೇಳಿ ಬಿಜೆಪಿ ನಾಯಕರ ವಿರುದ್ಧ ದೂರು ನೀಡಿ ಕಾಂಗ್ರೆಸ್ ದೆಹಲಿ ಪೊಲೀಸರನ್ನು ಸಂಪರ್ಕಿಸಿತ್ತು. ದೆಹಲಿ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ನಿಂದ ಕೆಲವು ಮಾಹಿತಿಗಳನ್ನು ಪಡೆಯಲು ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.