ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ 1763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ 1763 ವೈದ್ಯರ ನೇರ ನೇಮಕಾತಿ ಮುಗಿಸಿ ಅಧಿಸೂಚನೆ ಹೊರಡಿಸಲಾಗಿದೆ. 715 ತಜ್ಞರು, 75 ಜನರಲ್ ಮೆಡಿಸಿನ್, 57 ಜನರಲ್ ಸರ್ಜನ್, 145 ಗೈನಾಕಾಲಜಿಸ್ಟ್, 40 ಇಎನ್ಟಿ, 35 ಚರ್ಮರೋಗ ತಜ್ಞರು, 142 ಅರವಳಿಕೆ ತಜ್ಞರು, 153 ಮಕ್ಕಳ ತಜ್ಞರು, 17 ರೇಡಿಯಾಲಜಿಸ್ಟ್ ಗಳನ್ನು ನೇಮಕ ಮಾಡಲಾಗುತ್ತದೆ. ಹಾಗೆಯೇ 1048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಸಹ ನೇಮಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿನ ವೈದ್ಯರ ಕೊರತೆ ನೀಗಿಸುವುದು ಮತ್ತು ಆರೋಗ್ಯ ವ್ಯವಸ್ಥೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ವೈದ್ಯರ ಕೊರತೆ ಇದ್ದು, ಆ ಭಾಗಕ್ಕೆ ಪ್ರಾಶಸ್ತ್ಯ ನೀಡಿ ವೈದ್ಯರ ನೇಮಕವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.