ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಅಟ್ಟಹಾಸ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್ ಘಟಕಗಳ ಮೂಲಕ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ವಾರದಲ್ಲಿ ಗ್ರಾಮೀಣ ಭಾಗದ 1500 ಜನರನ್ನು ತಲುಪುವುದು ಈ ಯೋಜನೆಯ ಉದ್ದೇಶವಾಗಿದೆ. ಪ್ರತೀ ಜಿಲ್ಲೆಗೆ 15 – 20 ರಷ್ಟು ವಾಹನಗಳು ತೆರಳಲಿದ್ದು ಪ್ರತಿ ವಾಹನ ವಾರದಲ್ಲಿ ಮೂರು ಗ್ರಾಮಗಳಲ್ಲಿ ಸೇವೆ ನೀಡಲಿದೆ. ಆರಂಭಿಕ ಹಂತದಲ್ಲಿ ಬೆಂಗಳೂರಿನ ಗ್ರಾಮೀಣ ಭಾಗಗಳಲ್ಲಿ 15 ವಾಹನಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿನಿತ್ಯ ಈ ವಾಹನಗಳು ಸೇವೆ ಮುಗಿಸಿ ಜಿಲ್ಲಾ ಪ್ರಧಾನ ಕಚೇರಿಗೆ ಸಂಜೆ ವೇಳೆ ಮರಳಲಿವೆ.
ಈ ಮೊಬೈಲ್ ಘಟಕಗಳು ಸೋಂಕಿತರಿಗೆ ಔಷಧಗಳನ್ನು, ಚಿಕಿತ್ಸೆ ನೀಡುವುದರ ಜೊತೆಗೆ, ಸೋಂಕಿತರಿಗೆ ಕೌನ್ಸಲಿಂಗ್ ನಡೆಸುವ ಕಾರ್ಯ ಸಹ ಮಾಡಲಿದೆ. ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸುವಂತೆ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದೆ. ಇದರಲ್ಲಿ 2500 ಪಿಜಿ ಮತ್ತು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಇದನ್ನು ಇಂಟರ್ನ್ಶಿಪ್ ಎಂದು ಪರಿಗಣಿಸಿ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.