ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕೋಟಾದಡಿ ರಾಜ್ಯಕ್ಕೆ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಬಂದಿರುವುದಾಗಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಇಂದು 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಕರ್ನಾಟಕಕ್ಕೆ ಬಂದಿದೆ. ಕೇಂದ್ರದಿಂದ ಪಡೆದ ಒಟ್ಟು ಕೋವ್ಯಾಕ್ಸಿನ್ ಡೋಸ್ 12,91,280, ರಾಜ್ಯ ನೇರವಾಗಿ ಖರೀದಿಸಿದ ಒಟ್ಟು ಕೋವ್ಯಾಕ್ಸಿನ್ ಡೋಸ್ 1,44,170 ಡೋಸ್ಗಳು ತಿಳಿಸಿದ್ದಾರೆ.
ದೇಶದಲ್ಲಿ ಜನವರಿ 16, 2021 ರಂದು ಸ್ವದೇಶಿ ಉತ್ಪಾದನೆಯಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳಿಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದ್ದು, ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ಗೆ, ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ, ಬಳಿಕ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಸೂಚಿಸಿತ್ತು. ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು.
Karnataka received 1.25 lakh doses of COVAXIN today under the Central quota.
🔶 Total Covaxin doses received under Central quota is 12,91,280
🔶 Total Covaxin doses received under direct purchase is 1,44,170.— Dr Sudhakar K (@DrSudhakar_) May 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.