ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಸೋಂಕು ತಡೆಗಟ್ಟಲು ಹೊಸ ಡಿಸ್ಚಾರ್ಜ್ ಪ್ರೊಟೋಕಾಲ್ ಪಾಲನೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾಗಿ ಮೂಲಗಳು ತಿಳಿಸಿವೆ.
ಈ ಸಂಬಂಧ ಹಿರಿಯ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿರುವ ಸಿಎಂ, ಕೊರೋನಾ ಸೋಂಕಿತರು ಕೆಲವರಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಹೊಸ ಡಿಸ್ಚಾರ್ಜ್ ನಿಯಮಗಳನ್ನು ಪಾಲಿಸಬೇಕು. ವೈದ್ಯರ ಅನುಭವದ ಆಧಾರದಲ್ಲಿ ಸೋಂಕಿತರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡುವುದಕ್ಕೆ ಮುನ್ನ ಸೋಂಕು ಬಾಧಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಇದಕ್ಕಾಗಿ ಇಎನ್ಟಿ ತಜ್ಞರ ಸಲಹೆಗಳನ್ನು ತೆಗೆದುಕೊಂಡು ಪ್ರೊಟೋಕಾಲ್ ಪಾಲಿಸುವಂತೆ ಅವರು ತಿಳಿಸಿದ್ದಾರೆ.
ಹಾಗೆಯೇ ಸದ್ಯ ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ವಹಿಸುವಂತೆಯೂ ಅವರು ಸೂಚಿಸಿದ್ದಾರೆ. ಕೊರೋನಾ ಲಾಕ್ಡೌನ್ ಕಠಿಣ ನಿಯಮಗಳ ಪಾಲನೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.