ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬಡವರಿಗಾಗಿ ಸರ್ಕಾರ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯನ್ವಯ ಸಂಪೂರ್ಣವಾಗಿರುವ 5 ಸಾವಿರ ಮನೆಗಳನ್ನು ಮುಂದಿನ ಆಗಸ್ಟ್ 15 ರಂದು ಫಲಾನುಭವಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೀಡಲಿದ್ದಾರೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದ್ದಾರೆ.
ಯೋಜನೆಯ ಮೊದಲ ಹಂತದಲ್ಲಿ 313 ಎಕ್ರೆ ಸರ್ಕಾರಿ ಜಮೀನಿನಲ್ಲಿ 46499 ಬಹುಮಹಡಿ ವಸತಿ ಗೃಹಗಳ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. 45148 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಎರಡನೇ ಹಂತದಲ್ಲಿ 53,501 ಮನೆಗಳನ್ನು ನಿರ್ಮಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಈ ಯೋಜನೆಯಲ್ಲಿ ಮನೆ ಪಡೆಯಲು ಆನ್ಲೈನ್ ಮೂಲಕ ಈಗಾಗಲೇ 48,615 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಫಲಾನುಭವಿಗಳಿಗೆ ತಮಗೆ ಇಷ್ಟವಾದ ಫ್ಲ್ಯಾಟ್ ಆಯ್ಕೆಗೂ ಅವಕಾಶ ನೀಡಲಾಗಿದೆ ಎಂದಿದ್ದಾರೆ. ಹಾಗೆಯೇ ನಗರ ಜಿಲ್ಲೆಯ ಶಾಸಕರಿಗೆ 50% ಮನೆಗಳನ್ನು ತಮ್ಮ ವ್ಯಾಪ್ತಿಯ ಅರ್ಹ ಬಡವರಿಗೆ ನೀಡಲು ಅವಕಾಶ ಇರುವುದಾಗಿಯೂ ಅವರು ತಿಳಿಸಿದ್ದಾರೆ. ಹಾಗೆಯೇ ಕಡಿಮೆ ದರದಲ್ಲಿ ಬಡವರಿಗೆ ಈ ಮನೆಗಳನ್ನು ಒದಗಿಸಲಾಗುತ್ತಿದ್ದು 7 ಲಕ್ಷ ದಿಂದ 5 ಲಕ್ಷಕ್ಕೆ ದರ ಇಳಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಪ. ಜಾತಿ/ ಪಂಗಡದ ಬಡವರಿಗೆ 4.20 ಲಕ್ಷ ರೂ. ಗಳಿಗೆ ಮನೆ ಒದಗಿಸಲು ಚಿಂತನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.