ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲಿಯೂ ಕೊರೋನಾ ತೀವ್ರತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಯನ್ನು ಕೊರೋನಾ ವಾರಿಯರ್ಸ್ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳನ್ನು ಸಹ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಲಾಗುವುದು. ಕಂದಾಯ ಇಲಾಖೆಯ ಸಿಬ್ಬಂದಿಗೆ ನೀಡುವ ಸೌಲಭ್ಯಗಳನ್ನು ಇವರಿಗೂ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಶ್ರಮಿಸುತ್ತಿರುವ ಗ್ರಾಮೀಣಾಭಿವೃದ್ಧಿ ಇವಾಖೆಯ ನೌಕರರರಿಗೂ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸುವ ಮೂಲಕ ರಾಜ್ಯ ಸರ್ಕಾರ ನ್ಯಾಯ ಒದಗಿಸಿದೆ ಎನ್ನಬಹುದಾಗಿದೆ.
'ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಗಳನ್ನು ಕೂಡ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲಾಗುವುದು. ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುವ ಸೌಲಭ್ಯಗಳನ್ನು ಇವರಿಗೂ ವಿಸ್ತರಿಸಲಾಗುವುದು' : ಮುಖ್ಯಮಂತ್ರಿ @BSYBJP.
— CM of Karnataka (@CMofKarnataka) May 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.