ಬೆಂಗಳೂರು: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಂಪೋಟೆರಿಸಿನ್ ಬಿ ಔಷಧವನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ.
ಕೇಂದ್ರ ಸರ್ಕಾರ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ 29,250 ವಯಲ್ಸ್ಗಳಷ್ಟು ಅಂಪೋಟೆರಿಸಿನ್ ಬಿ ಔಷಧವನ್ನು ಹಂಚಿಕೆ ಮಾಡಿದ್ದು ರಾಜ್ಯಕ್ಕೆ 1,221 ವಯಲ್ಸ್ ಔಷಧ ದೊರೆತಿದೆ.
ಕಪ್ಪು ಶಿಲೀಂಧ್ರ ಸೋಂಕಿತರ ಪ್ರಕರಣಗಳ ಸಂಖ್ಯೆಯ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರ ಈ ಔಷಧ ಹಂಚಿಕೆ ನಡೆಸಿದೆ. ರಾಜ್ಯದಲ್ಲಿ 481 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, ಈ ಸಂಖ್ಯೆಯ ಆಧಾರದ ಮೇಲೆ ರಾಜ್ಯಕ್ಕೆ ಔಷಧ ಹಂಚಿಕೆ ಮಾಡಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.