ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿಗಳನ್ನು ಗಮನಿಸಿ ಲಾಕ್ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಸಂಬಂಧ ಜೂನ್ 5 ರಂದು ನಿರ್ಧರಿಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಜೂನ್ 7 ರ ವರೆಗೆ ಈಗಾಗಲೇ ನಿಗದಿ ಮಾಡಿರುವಂತೆ ಕಠಿಣ ಲಾಕ್ಡೌನ್ ಇರಲಿದೆ. ಆ ಬಳಿಕ ರಾಜ್ಯದ ಕೊರೋನಾ ಪರಿಸ್ಥಿತಿ ಗಮನಿಸಿ ಲಾಕ್ಡೌನ್ ವಿಸ್ತರಣೆ ಬಗ್ಗೆ ನಿರ್ಧರಿಸಲಾಗುತ್ತದೆ. ಈ ಸಂಬಂಧ ಕೊರೋನಾ ಹತೋಟಿಗೆ ರಾಜ್ಯದ ಜನತೆ ಸರ್ಕಾರದ ಜೊತೆಗೆ ಕೈ ಜೋಡಿಸಬೇಕು. ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ಗೂ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕೆ ಅಗತ್ಯವಾದ ಔಷಧಗಳ ಕೊರತೆ ಇದ್ದು, ಈ ಸಂಬಂಧ ಲಸಿಕೆ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಹಾಗೆಯೇ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು ಈ ಸಂಬಂಧ ಹೆಚ್ಚು ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳಿಗೂ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.