ನವದೆಹಲಿ: ರಾಷ್ಟ್ರೀಯ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕಾಗಿ ಈ ಜೂನ್ನಲ್ಲಿ ಸುಮಾರು 12 ಕೋಟಿ ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಕೇಂದ್ರ ಹೇಳಿದೆ.
ಆರೋಗ್ಯ ಸೇವಾ ಕಾರ್ಯಕರ್ತರು, ಮುಂಚೂಣಿ ಕಾರ್ಮಿಕರು ಮತ್ತು 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳು, ಆದ್ಯತೆಯ ಗುಂಪಿಗೆ ಲಸಿಕೆಯನ್ನು ನೀಡುವ ಸಲುವಾಗಿ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 6.9 ಕೋಟಿ ಡೋಸ್ ಲಸಿಕೆಗಳನ್ನು ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದಲ್ಲದೆ, ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳ ನೇರ ಖರೀದಿಗಾಗಿ 5.86 ಕೋಟಿ ಡೋಸ್ಗಳು ಲಭ್ಯವಿರುತ್ತವೆ ಎಂದಿದೆ.
ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಮತ್ತು ನಿರ್ವಹಿಸಲು ಕೇಂದ್ರ ಸರ್ಕಾರದ ಸಮಗ್ರ ಕಾರ್ಯತಂತ್ರದ ಪ್ರಮುಖ ಭಾಗ ವ್ಯಾಕ್ಸಿನೇಷನ್ ಆಗಿದೆ, ಜೊತೆಗೆ ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಕೋವಿಡ್ ಸೂಕ್ತ ನಡವಳಿಕೆಗಳು ಕೂಡ ಪ್ರಮುಖವಾಗಿದೆ.
ರಾಷ್ಟ್ರವ್ಯಾಪಿ ಲಸಿಕಾ ಕಾರ್ಯಕ್ರಮದ ಭಾಗವಾಗಿ, ಸರ್ಕಾರವು ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬೆಂಬಲ ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.