ಬೆಂಗಳೂರು: ಕೇಂದ್ರ ಸರ್ಕಾರದ ಪಿಎಂ ಕೇರ್ಸ್ ಅಡಿಯಲ್ಲಿ ರಾಜ್ಯಕ್ಕೆ ಈವರೆಗೆ 2913 ವೆಂಟಿಲೇಟರ್ಗಳು ಪೂರೈಕೆಯಾಗಿದ್ದು, ಆದ್ಯತೆಗನುಸಾರವಾಗಿ ಜಿಲ್ಲೆ, ತಾಲೂಕು ಆಸ್ಪತ್ರೆಗಳಿಗೆ ಅಳವಡಿಸಿರುವುದಾಗಿ ಮುಖ್ಯಮಂತ್ರಿ ಕಾರ್ಯಾಲಯ ಹೇಳಿದೆ.
ಈ ಪೈಕಿ 578 ವೆಂಟಿಲೇಟರ್ಗಳನ್ನು ಜಿಲ್ಲಾ ಆಸ್ಪತ್ರೆಗಳಲ್ಲಿ, 574 ವೆಂಟಿಲೇಟರ್ಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ, 708 ವೆಂಟಿಲೇಟರ್ಗಳನ್ನು ತಾಲೂಕು ಆಸ್ಪತ್ರೆಗಳಲ್ಲಿ, 24 ಸಮುದಾಯ ಆರೋಗ್ಯ ಕೇಂದ್ರ, 141 ವೆಂಟಿಲೇಟರ್ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಳವಡಿಸಿರುವುದಾಗಿ ತಿಳಿಸಿದೆ.
ರಾಜ್ಯಕ್ಕೆ 2 ನೇ ಹಂತದಲ್ಲಿ 888 ವೆಂಟಿಲೇಟರ್ಗಳು ಬಂದಿದ್ದು, ಅವುಗಳ ಪೈಕಿ 712 ವೆಂಟಿಲೇಟರ್ಗಳನ್ನು ಅಳವಡಿಸಲಾಗಿದೆ. ಉಳಿದ 176 ವೆಂಟಿಲೇಟರ್ಗಳನ್ನು ಅಗತ್ಯಾನುಸಾರ ವಿತರಿಸಲಾಗುವುದು ಎಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.