ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ತೀವ್ರತೆ ಏರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿಯೂ ಕೈದಿಗಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಕೇಂದ್ರ ಕಾರಾಗೃಹದಲ್ಲಿಯೂ ಸಹ ಕೋರೋನಾತಂಕ ಸೃಷ್ಟಿಯಾಗಿತ್ತು. ಆ ಸಂದರ್ಭದಲ್ಲಿ ಅದೆಷ್ಟೋ ಕೈದಿಗಳಿಗೆ ಕೊರೋನಾದಿಂದಾಗಿ ಬಿಡುಗಡೆ ಭಾಗ್ಯವೂ ದೊರೆತಿತ್ತು. ಇದೀಗ ಕೊರೋನಾ ಎರಡನೇ ಅಲೆ ಆರಂಭವಾಗಿದ್ದು, ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ ಲಸಿಕೆ ಅಭಿಯಾನ ಆರಂಭಿಸಿದೆ.
ಕಾರಾಗೃಹದಲ್ಲಿ ಸುಮಾರು 4600 ಕೈದಿಗಳಿದ್ದು, ಆ ಪೈಕಿ ಈಗಾಗಲೇ 45 ವರ್ಷ ಮೇಲ್ಪಟ್ಟ 580 ಕೈದಿಗಳಿಗೆ ಲಸಿಕೆ ನೀಡಲಾಗಿದೆ. 4120 ವಿಚಾರಣಾಧೀನ ಮತ್ತು ಸಜಾಬಂಧಿಗಳಿಗೆ ಲಸಿಕೆ ನೀಡಿಕೆ ಆರಂಭಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.