ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ನಡುವೆಯೇ ಬ್ಲ್ಯಾಕ್ ಮತ್ತು ವೈಟ್ ಫಂಗಸ್ ಸಂಕಷ್ಟ ಎದುರಾಗಿದ್ದು, ಇದಕ್ಕೆ ಔಷಧದ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಬಳಕೆ ಮಾಡಲಾಗುತ್ತಿರುವ ಅಂಪೋಟೆರಿಸಿನ್ ಬಿ ಔಷಧವನ್ನು ಮಿತವಾಗಿ ಬಳಕೆ ಮಾಡುವಂತೆ ಸರ್ಕಾರ ವೈದ್ಯರಿಗೆ ಸಲಹೆ ನೀಡಿದೆ.
ಬ್ಲ್ಯಾಕ್ ಫಂಗಸ್ ಸೋಂಕಿಗೆ ತುತ್ತಾದ ಎಲ್ಲರಿಗೂ ಈ ಔಷಧದ ಅಗತ್ಯ ಕಂಡುಬರುವುದಿಲ್ಲ. ಆದ್ದರಿಂದ ಅಗತ್ಯ ಬಿದ್ದವರಿಗೆ ಮಾತ್ರ ಈ ಔಷಧವನ್ನು ನೀಡಬೇಕು. ಔಷಧಗಳನ್ನು ಮಿತವಾಗಿ ಬಳಕೆ ಮಾಡುವ ಮೂಲಕ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಪ್ರತಿ ನಿತ್ಯ 500 – 600 ವಯಲ್ಸ್ಗಳಷ್ಟು ಅಂಪೋಟೆರಿಸಿನ್ ಬಿ ಔಷಧ ಪೂರೈಕೆ ಮಾಡಲಾಗುತ್ತಿದೆ. ಆದರೂ ಔಷಧಗಳ ಕೊರತೆ ಕಂಡು ಬರುತ್ತಿದೆ. ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ ವೈದ್ಯರು ರೋಗಿಗಳ ಆದ್ಯತಾನುಸಾರ ಈ ಔಷಧವನ್ನು ಬಳಕೆ ಮಾಡಬೇಕು ಎಂದು ತಿಳಿಸಿದೆ.
ರಾಜ್ಯದಲ್ಲಿ ಈ ವರೆಗೂ ಬ್ಲ್ಯಾಕ್ ಫಂಗಸ್ ಮತ್ತು ವೈಟ್ ಫಂಗಸ್ನಿಂದ 733 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿಯೂ, 328 ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.