ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಸೇವೆ ದೊರೆಯುವಂತೆ ಸೇವೆ ಸಲ್ಲಿಸಿ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ಸರ್ಕಾರಿ ಆಸ ಪತ್ರೆಗಳ ಮೇಲೆ ಸಾರ್ವಜನಿಕರಿಗೆ ಇರುವ ಧೋರಣೆಯನ್ನು ಬದಲಾಯಿಸುವ ನಿಟ್ಟಿನಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಕಾರ್ಯ ನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿ ದೊರೆಯುವ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ದೊರೆಯುವುದಿಲ್ಲ ಎಂಬ ಮನೋಭಾವ ಜನರಲ್ಲಿದೆ. ಅದನ್ನು ಬದಲಾಯಿಸುವಂತೆ ನಮ್ಮ ಖೆಲಸ ಇರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಸೇವೆ ನೀಡುವುದಕ್ಕೆ ಸಿಬ್ಬಂದಿಗಳು ಸಹಕರಿಸಬೇಕು ಎಂದು ಅವರು ಹೇಳಿದರು.
ಕೊರೋನಾ ಸಂಕಷ್ಟದ ನಡುವೆಯೂ ಸರ್ಕಾರ ವೈದ್ಯರ ನೇಮಕ ನಡೆಸಿದೆ. ಇದೊಂದು ಐತಿಹಾಸಿಕ ವಿಚಾರ. ಹೊಸ ವೈದ್ಯರು ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟದ ಸೇವೆ ನೀಡಬೇಕು. ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಮೂಲಸೌಕರ್ಯಗಳ ಅನುಕೂಲತೆಗಳಿವೆ. ಅವೆಲ್ಲವನ್ನೂ ಬಳಸಿಕೊಂಡು ಬಡವರು, ಜನಸಾಮಾನ್ಯರ ಸೇವೆ ಮಾಡುವಂತೆ ಅವರು ಹೇಳಿದ್ದಾರೆ. ಸರ್ಕಾರದ ಉಚಿತ ಸೇವೆಗಳ ಗುಣಮಟ್ಟ ಕಾಪಾಡಿಕೊಂಡು ಸೇವೆ ಸಲ್ಲಿಸುವಂತೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.