ಬೆಂಗಳೂರು: ರಾಜ್ಯದ ಆರ್ಥಿಕತೆಗೆ ಕೈಗಾರಿಕಾ ವಲಯ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಲಾಕ್ಡೌನ್ ಹಿನ್ನೆಲೆಯಲ್ಲಿ ಕೈಗಾರಿಕೆಗಳಿಗೂ ದೊಡ್ಡ ಮಟ್ಟದ ಹೊಗೆತ ಬಿದ್ದಿದೆ.
ಈ ಸಂಬಂಧ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ಚುರುಕುಗೊಳಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, ರಫ್ತು ಆಧಾರಿತ ಕೈಗಾರಿಕೆಗಳಿಗೆ 50% ಸಿಬ್ಬಂದಿಗಳನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅವಕಾಶ ನೀಡಿದೆ.
ರಾಜ್ಯದಲ್ಲಿ ಕ್ರಮೇಣ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆಗುಂದಿರುವ ಆರ್ಥಿಕ ಚಟುವಟಿಕೆಗಳನ್ನು ಮತ್ತೆ ಮೇಲೆತ್ತಲು ಸರ್ಕಾರ ಕೈಗಾರಿಕೆಗಳಿಗೆ ಈ ಅವಕಾಶ ನೀಡಿದೆ. ಇಂದಿನಿಂದಲೇ ಈ ನಿಯಮ ರಾಜ್ಯದಲ್ಲಿ ಜಾರಿಯಲ್ಲಿರಲಿದ್ದು, ವಾರದಲ್ಲಿ 2 ಬಾರಿ 10% ಗಳಂತೆ ಕಾರ್ಯ ನಿರ್ವಹಿಸುವ ಕಾರ್ಮಿಕರ ಕೊರೋನಾ ಟೆಸ್ಟ್ ನಡೆಸುವಂತೆಯೂ ಸರ್ಕಾರ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.