ಬೆಂಗಳೂರು: ಕೊರೋನಾ ಮೂರನೇ ಅಲೆ ಪೂರ್ವ ಸಿದ್ಧತೆಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಡಾ ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯ ಜೊತೆಗೆ ಚರ್ಚೆ ನಡೆಸಿದರು.
ಕೊರೋನಾ ಮೂರನೇ ಅಲೆ ತಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಕಲ್ಪಿಸಬೇಕಾದ ಮೂಲ ಸೌಕರ್ಯ, ಚಿಕಿತ್ಸಾ ಸೌಲಭ್ಯ, ಅಗತ್ಯ ಮಾನವ ಸಂಪನ್ಮೂಲ, ಔಷಧಗಳು ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಈ ಸಂದರ್ಭದಲ್ಲಿ ಮಾತುಕತೆ ನಡೆಸಲಾಯಿತು.
ಈ ಸಂಬಂಧ ಮುಂದಿನ ಒಂದು ವಾರಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗುವುದಾಗಿ ದೇವಿ ಪ್ರಸಾದ್ ಅವರ ತಂಡ ಮುಖ್ಯಮಂತ್ರಿಗಳಿಗೆ ತಿಳಿಸಿದೆ. ಅದರಂತೆಯೇ ಕಾರ್ಯಪಡೆಯ ಶಿಫಾರಸ್ಸುಗಳನ್ನು ಆಧರಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.