ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಕ್ರಮ ಜಾರಿಯಲ್ಲಿದ್ದು, ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದ್ದಾರೆ.
ಕೊರೋನಾ ಸೋಂಕನ್ನು ಸಂಪೂರ್ಣ ಹೊಡೆದೋಡಿಸುವ ನಿಟ್ಟಿನಲ್ಲಿ ಮತ್ತೊಂದು ವಾರದ ವರೆಗೆ ವಿಸ್ತರಿಸಲಾಗಿದೆ. ಜೂನ್ 14 ರ ಬೆಳಗ್ಗೆ 6 ಗಂಟೆ ವರೆಗೆ ಲಾಕ್ಡೌನ್ ನಿಯಮಗಳು ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಈಗಿರುವಂತೆಯೇ ಎಲ್ಲಾ ನಿಯಮಗಳು ಜಾರಿಯಲ್ಲಿರಲಿವೆ ,ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
400 ಕೋಟಿ ರೂ. ಗಳ ಎರಡನೇ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ನೇಕಾರರು,ಚಿತ್ರರಂಗದ ಕಾರ್ಮಿಕರು, ಮೀನುಗಾರರಿಗೆ ತಲಾ 3 ಸಾವಿರ ಪರಿಹಾರ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರಿಗೆವ3 ಸಾವಿರ ರೂ., ಅಂಗನವಾಡಿ ಕಾರ್ಯಕರ್ತರಿಗೆ 3 ಸಾವಿರ ರೂ. ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಅನುದಾನ ರಹಿತ ಶಾಲಾ ಶಿಕ್ಷಕರಿಗೆ 5 ಸಾವಿರ ರೂ. ಪರಿಹಾರ ಧನ ವಿತರಣೆ, ವಕೀಲ ಕಲ್ಯಾಣ ನಿಧಿಗೆ 5 ಕೋಟಿ ರೂ. ಅನುದಾನ, ಸಣ್ಣ ಕೈಗಾರಿಕೆಗಳಿಗೆ ವಿದ್ಯುತ್ ಶುಲ್ಕ ಪಾವತಿ ವಿನಾಯಿತಿ ನೀಡಲಾಗಿದೆ.
ಮುಜರಾಯಿ ದೇಗುಲದ ಅರ್ಚಕರು, ಸಿಬ್ಬಂದಿಗಳಿಗೆ 3 ಸಾವಿರದಂತೆ, ಮಸೀದಿಗಳ ಕೇಶ್, ಇಮಾಮ್ ಗಳಿಗೆ 3 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಹಾಗೆಯೇ ಹೊಟೇಲ್ಗಳಲ್ಲಿ ದಿನವಿಡೀ ಪಾರ್ಸೆಲ್ ಸೇವೆಗೆ ಅವಕಾಶ ಇರುವುದಾಗಿಯೂ ಸಿಎಂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.