ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಶೈಕ್ಷಣಿಕ ಚಟುವಟಿಕೆಗಳಲ್ಲಿಯೂ ಏರುಪೇರಾಗಿದೆ. ಆದರೂ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಗಮನ ಹರಿಸಿರುವ ಅಧಿಕಾರಿಗಳು ಮುಂದಿನ ಶೈಕ್ಷಣಿಕ ವರ್ಷಾರಂಭದ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದಲ್ಲಿ ಜೂ. 15 ರಿಂದ ಶಾಲೆಗಳು ಆರಂಭವಾಗಲಿರುವುದಾಗಿ ತಿಳಿಸಿದ್ದರು. ಆದರೆ ರಾಜ್ಯದಲ್ಲಿ ಕೊರೋನಾ ಸಂಕಷ್ಟದಿಂದ ಲಾಕ್ಡೌನ್ ಕ್ರಮ ಜಾರಿಯಲ್ಲಿದ್ದು ಈ ಸಮಯದಲ್ಲಿ ಶಾಲಾರಂಭ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 1 ರಿಂದ ತೊಡಗಿದಂತೆ ಶಾರಾರಂಭವಾಗುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ಹೇಳಿವೆ.
ಕಳೆದ ಲಾಕ್ಡೌನ್ ಅವಧಿಯಲ್ಲಿ ವಿದ್ಯಾಗಮ ಕಾರ್ಯಕ್ರಮ ನಡೆದಿತ್ತು. ಆದರೆ ಈ ಬಾರಿಯ ಲಾಕ್ಡೌನ್ ಸಂದರ್ಭದಲ್ಲಿ ಅದು ಅಸಾಧ್ಯವಾಗಿದೆ. ಆದ್ದರಿಂದ ಜುಲೈ 1 ರಿಂದ ಶಾಲಾರಂಭ ಮಾಡಲು ಸಿದ್ಧತೆ ನಡೆಯುತ್ತಿದೆ. ತಜ್ಞರ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.