ಬೆಂಗಳೂರು: ಕೊರೋನಾ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದೂರುಗಳನ್ನು ದಾಖಲು ಮಾಡಲು ನೂತನ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಕೊರೋನಾ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ ನ್ಯಾಯಮೂರ್ತಿ ಎ ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು, ವಾಟ್ಸಾಪ್, ಟೆಲಿಗ್ರಾಂಗಳಂತಹ ಆ್ಯಪ್ಗಳ ಮೂಲಕವೂ ದೂರು ಸಲ್ಲಿಕೆಗೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ. ಹಾಗೆಯೇ ಹೊಸ ವ್ಯವಸ್ಥೆಯ ಬಗ್ಗೆ ವ್ಯಾಪಕ ಪ್ರಚಾರ ನೀಡುವಂತೆಯೂ ಪೀಠ ಸೂಚಿಸಿದೆ.
ಇದಕ್ಕೆ ವಿವರಣೆ ನೀಡಿರುವ ರಾಜ್ಯ ಸರ್ಕಾರ ದೂರುಗಳನ್ನು ಸ್ವೀಕರಿಸಿ ಪರಿಹರಿಸುವ ನಿಟ್ಟಿನಲ್ಲಿ ವ್ಯವಸ್ಥೆ ರೂಪಿಸಿ ಜೂ. 2 ರಂದೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಿದೆ.
ಕೊರೋನಾ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ದೂರು ಸಲ್ಲಿಕೆ ಮಾಡಲು ಸರ್ಕಾರ ಹೊಸದಾಗಿ ರಚನೆ ಮಾಡಿರುವ ಪ್ರಾಧಿಕಾರದ ಮುಂದೆ ಮನವಿ ಸಲ್ಲಿಸಬೇಕು. ಇದು ಹೊಸ ವ್ಯವಸ್ಥೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಲು ಸಹ ಸಹಾಯ ಮಾಡಲಿದೆ ಎಂದು ಹೇಳಿದೆ. ಮುಂದಿನ ವಿಚಾರಣೆಯನ್ನು ಜೂ. 10 ಕ್ಕೆ ಮುಂದೂಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.