ನವದೆಹಲಿ: ಕೊರೋನಾ ಸೋಂಕಿನ ನಿವಾರಣೆಗೆ ಸಂಬಂಧಿಸಿದಂತೆ ಲಸಿಕೆ ನೀಡಿಕೆ ವ್ಯವಸ್ಥೆಯನ್ನು ಕೇಂದ್ರ, ರಾಜ್ಯ ಸರ್ಕಾರಗಳು ನಡೆಸುತ್ತಿವೆ. ಇದಕ್ಕೆ ಪೂರಕವಾಗಿ ರಾಜ್ಯಗಳ ಬಳಿಯಲ್ಲಿ ಇನ್ನೂ 1.93 ಕೋಟಿಗೂ ಅಧಿಕ ಕೊರೋನಾ ಲಸಿಕೆಗಳು ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವಾಲಯ ಹೇಳಿದೆ.
ದೇಶದ ಜನರ ಆರೋಗ್ಯ ಸಂರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಈಗಾಗಲೇ ಉಚಿತ ವರ್ಗದಡಿ ಮತ್ತು ಸರ್ಕಾರಗಳ ನೇರ ಖರೀದಿಯಡಿ 24 ಕೋಟಿ ಲಸಿಕೆಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಅನುಪಯುಕ್ತ ಸೇರಿ ಒಟ್ಟು 22,27,33,963 ಡೋಸ್ಗಳು ಲಭ್ಯವಿದೆ ಎಂದು ಸರ್ಕಾರ ತಿಳಿಸಿದೆ.
ದೇಶದಾದ್ಯಂತ ಲಸಿಕೆ ಅಭಿಯಾನದಡಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ಲಸಿಕೆಗಳನ್ನು ಕೇಂದ್ರ ಸರ್ಕಾರ ವಿತರಣೆ ಮಾಡುತ್ತಿದೆ. ಕೇಂದ್ರ ಸರ್ಕಾರ ಉಚಿತ ಲಸಿಕೆ ಅಭಿಯಾನವನ್ನು ಸಾರ್ವತ್ರಿಕ ಮಾಡಿದೆ. ಲಸಿಕೆ.ನೀಡುವಂತೆ ಪ್ರೋತ್ಸಾಹ ಸಹ ನೀಡುತ್ತಿದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.