ಬೆಂಗಳೂರು: ಕೊರೋನಾ ಎರಡನೇ ಅಲೆ ಸಂದರ್ಭದಲ್ಲಿ ಘೋಷಣೆ ಮಾಡಲಾದ ಮೊದಲ ಹಂತದ ಪ್ಯಾಕೇಜ್ನಲ್ಲಿ ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ವಿತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು.
ಸುಮಾರು 4 ಲಕ್ಷ ಕಟ್ಟಡ ಕಾರ್ಮಿಕರ ಖಾತಗಗೆ ಮೂರು ಸಾವಿರ ವಿತರಿಸಲು 10 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಈ ಪರಿಹಾರ ಧನ ವಿತರಣೆಯಡಿ ರಾಜ್ಯದ 25 ಲಕ್ಷ. ನೋಂದಾಯಿತ ಕಾರ್ಮಿಕರಿಗೆ ಒಟ್ಟು 749.55 ಕೋಟಿ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಜೊತೆಗೆ ಅಸಂಘಟಿತ ವಲಯದ 11 ವರ್ಗದ ಕಾರ್ಮಿಕರಿಗೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಕೆಗೆ ಅನುಕೂಲವಾಗುವಂತೆ ಆನ್ಲೈನ್ ಅರ್ಜಿ ಸಲ್ಲಿಕೆ ವ್ಯವಸ್ಥೆಗೂ ಚಾಲನೆ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ @BSYBJP ರವರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಸರ್ಕಾರದಿಂದ ಘೋಷಣೆ ಮಾಡಿರುವ ಕೋವಿಡ್ 2ನೇ ಅಲೆಯ ಪರಿಹಾರ ಸಹಾಯಧನವನ್ನು ನೇರವಾಗಿ ಅವರುಗಳ ಬ್ಯಾಂಕ್ ಖಾತೆಗೆ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಜಮೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು. (1/2)#KarnatakaFightsCorona pic.twitter.com/jxu7JuM7MF
— CM of Karnataka (@CMofKarnataka) June 5, 2021
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. (ನೇರ ನಗದು ವರ್ಗಾವಣೆ) ಮೂಲಕ ಜಮೆ ಮಾಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ @BSYBJP ರವರ ಭಾಷಣದ ಪ್ರಮುಖಾಂಶಗಳು; pic.twitter.com/lTZ1U0BxjZ
— CM of Karnataka (@CMofKarnataka) June 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.