ಬೆಂಗಳೂರು: ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ಮೂರು ಟ್ರೀ ಪಾರ್ಕ್ಗಳು ಸಾರ್ವಜನಿಕರ ಬಳಕೆಗೆ ಶೀಘ್ರವೇ ಮುಕ್ತವಾಗಲಿದೆ.
ನಗರದ ಕಬ್ಬನ್ ಪಾರ್ಕ್, ಲಾಲ್ ಬಾಗ್ ಗಳ ಮಾದರಿಯಲ್ಲಿಯೇ ಈ ಟ್ರೀ ಪಾರ್ಕ್ ಅಥವಾ ಗ್ರೀನ್ ಝೋನ್ ಗಳನ್ನು ಅಭಿವೃದ್ಧಿ ಮಾಡಲಾಗಿದ್ದು ಲಾಕ್ಡೌನ್ ಬಳಿಕ ಅವುಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು.
ದಕ್ಷಿಣದಲ್ಲಿ ತುರುಹಳ್ಳಿ, ಪೂರ್ವದಲ್ಲಿ ಕಾಡುಗೋಡಿ, ಮಾಚೋಹಳ್ಳಿ ಪ್ರದೇಶದಲ್ಲಿ ಟ್ರೀ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಕೊರೋನಾ ಕಾರಣದಿಂದ ಈ ಕಾಮಗಾರಿ ವಿಳಂಬವಾಗಿತ್ತು. ಈ ಪರಿಸ್ಥಿತಿ ಸುಧಾರಿಸಿದ ಬಳಿಕ ಇವುಗಳ ಕಾಮಗಾರಿ ಸಂಪೂರ್ಣ ಮಾಡಲಾಗುತ್ತದೆ. ತುರುಹಳ್ಳಿ, ಕಾಡುಗೋಡಿ ಟ್ರೀ ಪಾರ್ಕ್ಗಳಲ್ಲಿ ಹೆಚ್ಚಿನ ಕಾಮಗಾರಿ ಸಂಪೂರ್ಣವಾಗಿದ್ದು, ಶೀಘ್ರದಲ್ಲೇ ಲೋಕಾರ್ಪಣೆ ಕಾರ್ಯ ನಡೆಯಲಿದೆ. ಮಾಚೋಹಳ್ಳಿ ಟ್ರೀ ಪಾರ್ಕ್ ಕಾಮಗಾರಿ ಸಹ ಶೀಘ್ರದಲ್ಲೇ ಸಂಪೂರ್ಣವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇವುಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಾಕಿಂಗ್ ಟ್ರ್ಯಾಕ್, ಬೆಂಚ್ ಮೊದಲಾದ ವ್ಯವಸ್ಥೆ ಇದೆ. ಈ ಕಾರ್ಯಕ್ಕೆ ಅರಣ್ಯ ಇಲಾಖೆ ಮತ್ತು ಕಾರ್ಪೊರೇಟ್ ಸಂಸ್ಥೆಗಳು ಸಹ ಕೈಜೋಡಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.