ಬೆಂಗಳೂರು: 5% ಕ್ಕಿಂತ ಕಡಿಮೆ ಕೊರೋನಾ ಸೊಂಕಿತರ ಪ್ರಮಾಣ ಇರುವ ಜಿಲ್ಲೆಗಳಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲ ಮಾಡುವ ಸಂಬಂಧ ಅಧಿಕಾರಿಗಳು ಮತ್ತು ಸಚಿವ ಸಂಪುಟದ ಜೊತೆ ಚರ್ಚೆ ನಡೆಸಿ ಅಗತ್ಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಜೂ. 14 ರ ವರೆಗೆ ಲಾಕ್ಡೌನ್ ಕ್ರಮ ಜಾರಿಯಲ್ಲಿದೆ. ಕೊರೋನಾ ದೃಢಪಡುವ ಪ್ರಮಾಣ ಇಳಿಕೆಯಾಗುತ್ತಿರುವ ಜಿಲ್ಲೆಗಳಿಗೆ ಯಾವ ರೀತಿಯಲ್ಲಿ ಅನ್ಲಾಕ್ ಪ್ರಕ್ರಿಯೆ ಕೈಗೊಳ್ಳಬಹುದು ಎಂಬುದರ ಬಗ್ಗೆ ಶೀಘ್ರದಲ್ಲೇ ನಿರ್ಧರಿಸಲಾಗುವುದು. ಕಳೆದ ಕೆಲ ದಿನಗಳಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಈ ಹಿಂದೆ ಒಂದೇ ಸಮನೆ ಏರಿಕೆಯಾಗಿ 50% ಗಳಿಗಿಂತಲೂ ಹೆಚ್ಚಾಗಿದ್ದ ಸೋಂಕಿತರ ಪ್ರಮಾಣ, ಸದ್ಯ 9.69% ಗಳಿಗೆ ಇಳಿಕೆಯಾಗಿದೆ. 5% ಗಿಂತ ಪ್ರಕರಣಗಳ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳಲ್ಲಿ ಅನ್ಲಾಕ್ ಕ್ರಮಗಳ ಬಗ್ಗೆ ಸರ್ಕಾರ ಚಿಂತಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.