ಮೈಸೂರು: ಗೃಹ ಆರಾಧನೆ ವಿಭಾಗದಲ್ಲಿ ಜಾಗತಿಕ ಮಟ್ಟದಲ್ಲಿ ವಿಶ್ವದ ಮೊದಲ, ಏಕೈಕ ‘ಜೀರೋ ಕಾರ್ಬನ್’ ಪ್ರಮಾಣಪತ್ರ ಪಡೆದ ಸಂಸ್ಥೆಯಾಗಿ ಕರ್ನಾಟಕದ ಸೈಕಲ್ ಪ್ಯೂರ್ ಅಗರಬತ್ತಿ ಕೀರ್ತಿ ಮುಡಿಗೇರಿಸಿಕೊಂಡಿದೆ.
ಮೈಸೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೈಕಲ್ ಪ್ಯೂರ್ ಅಗರಬತ್ತಿ ಇಂತಹ ಒಂದು ಪ್ರತಿಷ್ಠೆಗೆ ಭಾಜನವಾಗಿರುವುದಕ್ಕೆ ಸಂಸ್ಥೆ ಸಂತಸ ವ್ಯಕ್ತಪಡಿಸಿದೆ.
ಈ ಸಂಬಂಧ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗ ಅವರು ಸಂತಸ ಹಂಚಿಕೊಂಡಿದ್ದು, ಆಧುನಿಕ ಜಗತ್ತಿಗೆ ಹವಾಮಾನ ಬದಲಾವಣೆ ದೊಡ್ಡ ಕಂಟಕವಾಗಿದೆ. ಮುಂದಿನ ಜನಾಂಗಕ್ಕೆ ಆರೋಗ್ಯಪೂರ್ಣ ಪರಿಸರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಸೈಕಲ್ ಪ್ಯೂರ್ ಅಗರಬತ್ತಿಯನ್ನು ಸಂಸ್ಥೆ ಶೂನ್ಯ ಕಾರ್ಬನ್ ಆಶಯದಲ್ಲಿ ಉತ್ಪಾದನೆ ಮಾಡುತ್ತಿದ್ದು, ಭೂಮಿಯ ಆರೋಗ್ಯದ ಬದ್ಧತೆಯನ್ನು ನಾವು ಹೊಂದಿದ್ದೇವೆ. ಭವಿಷ್ಯದ ದೃಷ್ಟಿಯಿಂದ ಹವಾಮಾನ ಬದಲಾವಣೆ ವಿರುದ್ಧ ಹೋರಾಟಕ್ಕೆ ನಮ್ಮ ಜೊತೆ ಎಲ್ಲರೂ ಕೈ ಜೋಡಿಸಿ ಎಂದು ತಿಳಿಸಿದ್ದಾರೆ.
ಈ ಸಾಧನೆಗಾಗಿ ಸಂಸ್ಥೆ ಹಲವು ಸಮರ್ಥನೀಯ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿದೆ. ಸಂಸ್ಥೆಯ ಈ ಕಾರ್ಯವನ್ನು ಬ್ರಿಟನ್ ನ್ಯಾಚುರಲ್ ಕ್ಯಾಪಿಟಲ್ ಪಾರ್ಟ್ನರ್ಸ್ ಗುರುತಿಸಿದೆ. ಇದು ವಿಶ್ವದಾದ್ಯಂತ ವ್ಯಾಪಕವಾಗಿ ತಿಳಿದಿರುವ ಇಂಗಾಲ ಮತ್ತು ಸುಸ್ಥಿರತೆ ಪರಿಹಾರ ಒದಗಿಸುವ ಸ್ವಯಂಪ್ರೇರಿತ ಸಂಸ್ಥೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.