ಬೆಂಗಳೂರು: ರಾಜ್ಯದಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿಯ ಅಕ್ರಮ ಸಕ್ರಮಕ್ಕೆ ಸಂಬಂಧಿಸಿದಂತೆ ತಂತ್ರಾಂಶಕ್ಕೆ ಅಪ್ಲೋಡ್ ಆಗದೇ ಉಳಿದಿರುವ 4.83 ಲಕ್ಷ ಅರ್ಜಿಗಳನ್ನು ಜುಲೈ 31 ರೊಳಗಾಗಿ ಅಪ್ಲೋಡ್ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಅರ್ಹ ರೈತರ ಜಮೀನುಗಳ ಸಕ್ರಮಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಅರ್ಜಿಗಳನ್ನು ಶೀಘ್ರ ಅಪ್ಲೋಡ್ ಮಾಡಲಾಗುತ್ತದೆ. ಸರ್ಕಾರಿ ಸ್ವಾಮ್ಯದ ಜಮೀನಿನಲ್ಲಿ 2005 ಜನವರಿ 1 ಕ್ಕೂ ಪೂರ್ವದಿಂದ ಅನಧಿಕೃತ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರ ಜಮೀನುಗಳನ್ನು ಸಕ್ರಮ ಮಾಡಲು ಅರ್ಜಿಗಳ ಅಪ್ಲೋಡ್ ವ್ಯವಸ್ಥೆಗೆ ಮತ್ತೆ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸರ್ಕಾರಿ ಜಮೀನಿನಲ್ಲಿ 2015 ರ ಜನವರಿ 1 ಕ್ಕೂ ಮೊದಲೇ ಅನಧಿಕೃತ ನಿರ್ಮಾಣದ ವಾಸದ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಮಾಡುವ ಕೊನೆಯ ದಿನಾಂಕವನ್ನು ಮಾರ್ಚ್ 31, 2022 ವರೆಗೆ ವಿಸ್ತರಣೆ ಮಾಡಲಾಗಿದೆ. ಆ ಬಳಿಕ ಅರ್ಜಿಗಳ ಪರಿಶೀಲನೆ ನಡೆಸಿ 2023 ರ ಮಾರ್ಚ್ 31 ರೊಳಗಾಗಿ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಅಶೋಕ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.