ಬೆಂಗಳೂರು: ನಗರಕ್ಕೆ ಸಂಬಂಧಿಸಿದಂತೆ ಫುಟ್ಪಾತ್ಗಳ ಮೇಲಿನ ಟ್ರಾನ್ಸ್ಫಾರ್ಮರ್ಗಳಿಂದ ಉಂಟಾಗುವ ಅಪಾಯಗಳ ಬಗ್ಗೆ ಅಧ್ಯಯನ ನಡೆಸಲು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ಸಮನ್ವಯ ಸಮಿತಿಯೊಂದನ್ನು ರಚನೆ ಮಾಡಲಾಗಿದೆ.
ನಗರದ ಫುಟ್ಪಾತ್ಗಳಲ್ಲಿ ಅಪಾಯಕಾರಿಯಾಗಿರುವ ಟ್ರಾನ್ಸ್ಫಾರ್ಮರ್ಗಳ ತೆರವಿಗೆ ಸಂಬಂಧಿಸಿದಂತೆ ಹೈಕೋರ್ಟ್ಗೆ ನಿವೃತ್ತ ವಿಂಗ್ ಕಮಾಂಡರ್ ಜಿ ಬಿ ಅತ್ರಿ ಅವರು ಅರ್ಜಿ ಸಲ್ಲಿಸಿದ್ದರು. ಇದರ ಪರಾಮರ್ಶೆ ನಡೆಸಲು ಹೈಕೋರ್ಟ್ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಅಪಾಯದ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗಿದೆ.
ಈ ಸಮಿತಿ ಫುಟ್ಪಾತ್ಗಳಲ್ಲಿ ಜನರ ಸಂಚಾರಕ್ಕೆ ಅಡಚಣೆ ಆಗುತ್ತಿದೆಯೇ? ಎಂಬುದರ ಕುರಿತು ಪರಿಶೀಲಿಸಲಿದೆ. ಈ ಹಿಂದೆಯೂ ಕೋರ್ಟ್ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಕೆ ಮಾಡುವ ಮೊದಲು ನೆಲ ಅಗೆಯಲು ಸಕ್ಷಮ ಪ್ರಾಧಿಕಾರದಿಂದ ಲೈಸೆನ್ಸ್ ಪಡೆದುಕೊಳ್ಳುವಂತೆಯೂ ಸೂಚಿಸಿತ್ತು. ಇದೀಗ ರಸ್ತೆಯ ಫುಟ್ಪಾತ್ನಲ್ಲಿ ಜನರ ಜೀವಕ್ಕೆ ಅಪಾಯ ಒಡ್ಡುವ ಸ್ಥಿತಿಯಲ್ಲಿನ ಟ್ರಾನ್ಸ್ಫಾರ್ಮರ್, ವಿದ್ಯುತ್ ತಂತಿಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪೂರಕ ಅಧ್ಯಯನ ನಡೆಸಿ ವಿವರಣೆ ನೀಡಲು ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.