ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಅಬ್ಬರ ತಗ್ಗುತ್ತಿರುವ ಬೆನ್ನಲ್ಲೇ ,ಕಾದು ನೋಡಿ ಅನ್ಲಾಕ್ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿರುವುದಾಗಿ ಮೂಲಗಳು ಹೇಳಿವೆ.
ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಆಗಿದ್ದ ತಪ್ಪುಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಈ ಬಾರಿ ಅಧ್ಯಯನ ನಡೆಸಿ ನಂತರ ಅಂತಿಮ ನಿರ್ಣಯಗಳನ್ನು ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಅಧಿಕಾರಿಗಳು ಅಧಿಕ ಅವಧಿಯಲ್ಲಿ ಅನ್ಲಾಕ್ ಪ್ರಕ್ರಿಯೆ ಸಂಬಂಧ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜೊತೆಗೆ ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯೂ ಸಂಭವಿಸುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ವೈಜ್ಞಾನಿಕ ಮಾರ್ಗಸೂಚಿ ಅಳವಡಿಸಿ ಅನ್ಲಾಕ್ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಸರ್ಕಾರದ ಅಧಿಕಾರಿಗಳು, ತಜ್ಞರು, ತಾಂತ್ರಿಕ ಸಲಹಾ ಸಮಿತಿ ದೇಶ, ವಿದೇಶಗಳು ಅನುಸರಿಸಿದ ಅನ್ಲಾಕ್ ಕ್ರಮಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. ಈ ಸಂಬಂಧ ಸರ್ಕಾರದ ಅಧಿಕಾರಿಗಳು ಸರಣಿ ಸಭೆಗಳನ್ನು ಸಹ ನಡೆಸುತ್ತಿದ್ದಾರೆ.
ಆರಂಭಿಕ ಹಂತದಲ್ಲಿ ಉದ್ಯಾನಗಳು, ಆರಂಭಿಕ ಹಂತದಲ್ಲಿ ಆಟದ ಮೈದಾನಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಹಾಗೆಯೇ ರಾಜ್ಯದ ಆರ್ಥಿಕ ಚಟುವಟಿಕೆಗಳನ್ನು ಚೇತರಿಸುವಂತೆ ಮಾಡುವ ಸಲುವಾಗಿ ಕೆಲವು ಕಚೇರಿಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಯಾವುದೇ ರೀತಿಯ ಜಾತ್ರೆ, ದೊಡ್ಡ ಮಟ್ಟದ ಸಮಾರಂಭಗಳಿಗೆ ಈ ಬಾರಿ ಅವಕಾಶ ನೀಡುವುದಿಲ್ಲ ಎಂದು ಸರ್ಕಾರದ ಮೂಲಗಳು ಹೇಳಿವೆ. ನಿರ್ಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಸೋಂಕಿತರ ಸಂಖ್ಯೆಯನ್ನು ಕಡಿಮೆ ಮಾಡಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಇದಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯ ಇದ್ದು, ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ರೂಪುರೇಷೆ, ಮಾರ್ಗಸೂಚಿ ರೂಪಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾಗೆಯೇ ಜೂ. 14 ರ ಲಾಕ್ಡೌನ್ ಮುಗಿಯುವಲ್ಲಿಯವರೆಗೆ ಸರ್ಕಾರ ಅನ್ಲಾಕ್ ಸಂಬಂಧಿಸಿದಂತೆ ಯಾವುದೇ ರೀತಿಯ ಘೋಷಣೆ ಮಾಡಬಾರದು. ಕೊರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರ ಮತ್ತಷ್ಟು ಕಾಲಾವಕಾಶ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.