ಬೆಂಗಳೂರು: ಕೊರೋನಾ ಕರ್ತವ್ಯದಲ್ಲಿ ತೊಡಗಿಸಿಕೊಂಡ ಆಶಾ ಕಾರ್ಯಕರ್ತರ ಜೊತೆಗೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿದ್ದಾರೆ.
ಕೊರೋನಾ ನಿರ್ವಹಣೆಯಲ್ಲಿ ಆಶಾ ಕಾರ್ಯಕರ್ತರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಪಾಯದ ಸನ್ನಿವೇಶದಲ್ಲಿ ಜೀವ ಪಣಕ್ಕಿಟ್ಟು ದುಡಿಯುವ ಅವರಿಗೆ ಕೊರೋನಾ ಎರಡನೇ ಆರ್ಥಿಕ ಪ್ಯಾಕೇಜ್ನಲ್ಲಿ 3 ಸಾವಿರ ಸಹಾಯ ಧನ ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ.
ಈ ಸಂವಾದದಲ್ಲಿ ಸಿಎಂ ಅವರು ಆಶಾ ಕಾರ್ಯಕರ್ತರ ಆರೋಗ್ಯದ ಸ್ಥಿತಿಗತಿ, ಕಾರ್ಯ ನಿರ್ವಹಣೆ, ಅವರ ವ್ಯಾಪ್ತಿಯ ಕೊರೋನಾ ಪ್ರಕರಣಗಳ ಸ್ಥಿತಿಗತಿ, ಸಾರ್ವಜನಿಕರು, ಮೇಲಧಿಕಾರಿಗಳ ಸಹಕಾರ ಮೊದಲಾದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಕೊರೋನಾ ನಿರ್ವಹಣಾ ಕಾರ್ಯದಲ್ಲಿ ತಮ್ಮ ಅನುಭವಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಹಂಚಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.