ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿಯಲ್ಲಿ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬಿತ್ತನೆ ಬೀಜ ಕಿರುಚೀಲಗಳ ವಿತರಣೆಗೆ ಸಚಿವ ಬಿ ಸಿ ಪಾಟೀಲ್ ಚಾಲನೆ ನೀಡಿದರು.
ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಕೃಷಿ ಇಲಾಖೆಯ ವತಿಯಿಂದ ಈ ಕಿರುಚೀಲಗಳನ್ನು ರೈತರಿಗೆ ಹಸ್ತಾಂತರ ಮಾಡುವ ಮೂಲಕ ಈ ಕಾರ್ಯಕ್ಕೆ ಅವರು ಚಾಲನೆ ನೀಡಿದರು. ಜೊತಗೆ ಕೃಷಿ ಅಭಿಯಾನ ವಾಹನಕ್ಕೂ ಅವರು ಇದೇ ಸಂದರ್ಭದಲ್ಲಿ ಹಸಿರು ನಿಶಾನೆ ತೋರಿಸಿದರು.
ಬಿತ್ತನೆ ಬೀಜ, ರಸಗೊಬ್ಬರ ಮೊದಲಾದವುಗಳ ಅಕ್ರಮ ದಾಸ್ತಾನು, ಕೃತಕ ಅಭಾವ ಸೃಷ್ಟಿ, ಹೆಚ್ಚು ಬೆಲೆಗೆ ಮಾರಾಟ, ಕಳಪೆ ವಸ್ತುಗಳ ಮಾರಾಟ ನಡೆಸಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಬಿ ಸಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.