ಬೆಂಗಳೂರು: ಕೊರೋನಾ ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿ ನಲುಗಿದ್ದ ಚಿತ್ರರಂಗಕ್ಕೆ ರಾಜ್ಯ ಸರ್ಕಾರ 6.60 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿದೆ.
ಕೊರೋನಾ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ತುತ್ತಾಗಿರುವ ಸಿನಿಮಾ, ಕಿರುತೆರೆಯ ಬಡ ಕಲಾವಿದರು, ತಂತ್ರಜ್ಞರಿಗೆ ಅನುಕೂಲ ಸೃಷ್ಟಿಸುವ, ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಅನುದಾನ ಬಿಡುಗಡೆ ಮಾಡಿದೆ. ಆ ಮೂಲಕ ಈ ಬಾರಿಯ ಎರಡನೇ ಆರ್ಥಿಕ ಪ್ಯಾಕೇಜ್ನಲ್ಲಿ ಘೋಷಣೆ ಮಾಡಿದ್ದ ಭರವಸೆಯನ್ನು ನೆರವೇರಿಸಿದೆ.
ಸಿನೆಮಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಬಡ ಕಾರ್ಮಿಕರಲ್ಲಿ ಸುಮಾರು 22 ಸಾವಿರ ಜನರಿಗೆ ತಲಾ 3 ಸಾವಿರಗಳಂತೆ ಸರ್ಕಾರ ಪರಿಹಾರ ಒದಗಿಸಲಿದೆ. ಈ ಹಿಂದೆ ಸಿನಿಮಾ ರಂಗಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಮನವಿ ಬಂದಿತ್ತು. ಅದನ್ನು ಪರಿಗಣಿಸಿ ಸರ್ಕಾರ ಎರಡನೇ ಪ್ಯಾಕೇಜ್ನಲ್ಲಿ ಈ ಕ್ಷೇತ್ರಕ್ಕೆ ನೆರವಾಗುವುದಾಗಿ ತಿಳಿಸಿತ್ತು. ಅದರಂತೆ ಇದೀಗ ಮೊತ್ತ ಬಿಡುಗಡೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.