ಬೆಂಗಳೂರು: ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ವೈದ್ಯಕೀಯ ಆಮ್ಲಜನಕದ ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೈಗಾರಿಕೆಗಳಿಗೆ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿ 580 ಮೆಟ್ರಿಕ್ ಟನ್ ಆಕ್ಸಿಜನ್ಗೆ ಬೇಡಿಕೆ ಇತ್ತು. ಬೇಡಿಕೆ ಕಡಿಮೆ ಆಗಿದೆ ಎಂದು ಕಡೆಗಣಿಸುವುದಲ್ಲ. ಮೂರನೇ ಅಲೆ ಎದುರಾದಲ್ಲಿ ಅದನ್ನು ಸಮರ್ಥವಾಗಿ ಎದುರಿಸಲು ಅಗತ್ಯ ತಯಾರಿ ನಡೆಸಿಕೊಳ್ಳಬೇಕು. ಎಲ್ಲಾ ಜಿಲ್ಲಾ ಆಸ್ಪತ್ರೆಗಳೂ ಆಕ್ಸಿಜನ್ ತಯಾರಿಯಲ್ಲಿ ಸ್ವಾವಲಂಬಿಯಾಗಬೇಕು. ಹಾಗೆಯೇ ಜಿಲ್ಲೆಗಳಲ್ಲಿ ಬಫರ್ ಸ್ಟಾಕ್ ಸಂಗ್ರಹಣೆಗೆ ಅಗತ್ಯವಾದ ಸೌಲಭ್ಯ ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಹೊಸ ತಂತ್ರಜ್ಞಾನ ಅಭಿವೃದ್ಧಿ ಮಾಡಲಾಗಿದೆ. ಈ ತಂತ್ರಾಂಶ ಶೀಘ್ರದಲ್ಲಿಯೇ ಕಾರ್ಯನಿರ್ವಹಿಸಲಿದೆ. ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಇದು ಸಹಕಾರಿಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.