ಬೆಂಗಳೂರು: ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಭಿವೃದ್ಧಿ ಮಾಡಿರುವ ‘ಡಿಬಿಟಿ’ ಮೊಬೈಲ್ ಆ್ಯಪ್ ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದರು.
ರಾಜ್ಯದಲ್ಲಿ ಈ ವರೆಗೆ ಸುಮಾರು120 ಯೋಜನೆಗಳನ್ನು ಈ ವೇದಿಕೆಯಲ್ಲಿ ಒಳಪಡಿಸಲಾಗಿದೆ. ಆ ಮೂಲಕ ಕಳೆದ ಎರಡೇ ವರ್ಷಗಳ ಅವಧಿಯಲ್ಲಿ ಸುಮಾರು 12 ಸಾವಿರ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. ಈ ವ್ಯವಸ್ಥೆಯಿಂದಾಗಿ ಅಕ್ರಮ, ಲೋಪ ದೋಷ, ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಬಿದ್ದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕೊರೋನಾ ಮೊದಲನೇ ಅಲೆ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಸರ್ಕಾರ ಘೋಷಿಸಿದ ಎಲ್ಲಾ ಪ್ಯಾಕೇಜ್ಗಳೂ ಇದರ ಮೂಲಕವೇ ಪಾವತಿ ಮಾಡಲಾಗಿದೆ ಎಂದು ಹೇಳಿದರು. ಈ ಬಾರಿಯ ಆಯವ್ಯಯದಲ್ಲಿ ರಾಜ್ಯದ ಫಲಾನುಭವಿಗಳಿಗೆ ಘೋಷಿಸಲಾದ ಆರ್ಥಿಕ ನೆರವನ್ನು ಇದೇ ಡಿಬಿಟಿ ವೇದಿಕೆಯಡಿ ತರಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.