ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಹುಶಿಸ್ತೀಯ ಬೋಧನಾ ಕ್ರಮದಂತೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿಜ್ಞಾನ ಆಧಾರದ ಕೋರ್ಸ್ಗಳನ್ನು ಬೋಧಿಸುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಜ್ಞರ ಜೊತೆಗೆ ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಅವರು ಸಮಾಲೋಚಿಸಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 220 ಎಂಜಿನಿಯರಿಂಗ್ ಕಾಲೇಜುಗಳಿದ್ದು, ಇವುಗಳಲ್ಲಿ 100 ಕಾಲೇಜುಗಳು ಅತ್ಯುತ್ತಮ ಮೂಲಸೌಕರ್ಯ ಹೊಂದಿದೆ. 4 ವರ್ಷಗಳ ವಿಜ್ಞಾನ ಆಧರಿತ ಕೋರ್ಸ್ಗಳನ್ನು ಈ ಕಾಲೇಜುಗಳಲ್ಲಿ ಬೋಧಿಸುವ ಸಾಧ್ಯತೆ ಬಗ್ಗೆ ಜುಲೈ ಅಂತ್ಯದೊಳಗಾಗಿ ಒಂದು ನಿರ್ಧಿಷ್ಟ ಕಾರ್ಯ ಚೌಕಟ್ಟಿನಲ್ಲಿರೂಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಾಗೆಯೇ ಸಾಧ್ಯವಾದಲ್ಲಿ ಒಂದು ವಾರಗಳಲ್ಲಿ ಈ ಸಂಬಂಧ ತಾತ್ಕಾಲಿಕ ವರದಿ ನೀಡಲು ಪ್ರಯತ್ನ ನಡೆಸುವಂತೆಯೂ ಅವರು ಹೇಳಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಈಗಾಗಲೇ ಸಂಪುಟ ಸಮ್ಮತಿಸಿದೆ. ಈ ಹಿನ್ನೆಲೆಯಲ್ಲಿ ಈ ವರ್ಷದಿಂದಲೇ ಕೋರ್ಸ್ಗಳ ಬೋಧನೆ ಸಾಧ್ಯವೇ?, ಅದಕ್ಕೆ ಎದುರಾಗಬಹುದಾದ ಕಾನೂನು ಸಂಬಂಧಿತ ತೊಡಕುಗಳ ಬಗೆಗೂ ಪರಿಶೀಲಿಸಲು ಅವರು ತಿಳಿಸಿದ್ದಾರೆ. ಗುಣಮಟ್ಟದ ಬೋಧನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.